ವಿಜಯಪುರ: ಬಬಲೇಶ್ವರ ಸಮೀಪ ಅರ್ಜುಣಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ವಿಜಯಪುರದಿಂದ ಜಮಖಂಡಿಗೆ ಹೋಗುತ್ತಿದ್ದ ಕಾರು ಮತ್ತು ಜಮಖಂಡಿಯಿಂದ ವಿಜಯಪುರಕ್ಕೆಹೋಗಯತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕ ಸಾವನ್ನಪ್ಪಿದ್ದಾರೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.


























































