ಬೆಂಗಳೂರು: ಅರಕೆರೆ ಬಳಿ ಟ್ಯೂಷನ್ ಗೆ ತೆರಕಿದ್ದ ಬಾಲಕನನ್ನು ಅಪಹರಿಸಿ ಕೊಲೆಮಾಡಿರುವ ಘಟನೆ ಬುಧವಾರ ನಡೆದಿದೆ. ಅರೆಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದ ಬಾಲಕ ನಿಶ್ಚಿತ್ (13) ನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಬಲಿಯೋಕ ಪೋಷಕರಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಾಲಕನ ತಂದೆ ಹುಳಿಮಾವು ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅದಾದ ಸ್ವಲ್ಪ ಹೊತ್ತಿನಲ್ಲೇ ಬಾಲನಕ್ಕೂ ಅಪಹರಣಕಾರರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ಅಪಹರಣ ಕೊಲೆ ನಡೆಸಿದ್ದಾರೆ ಎನ್ನಲಾದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡರು. ಆರೋಪಿಗಳ ಸುಳಿವಾಧರಿಸಿ ಬಂಧನಕ್ಕೆ ತೆರಳಿದ ಸಂದರ್ಭದಲ್ಲಿ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಆ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಎಂಬವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜಯನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.