ಮೈಸೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ ಬಿಜೆಪಿ ಹಿರಿಯ ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಸುದೀರ್ಘ ಕಾಲ ಆಪ್ತ ಸಹಾಯಕರಾಗಿದ್ದ ಕಾ.ಪು ಸಿದ್ದಲಿಂಗಸ್ವಾಮಿ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
56 ವರ್ಷ ಹರೆಯದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಇದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
2013ರಲ್ಲಿ ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ದ KJP ಅಭ್ಯರ್ಥಿಯಾಗಿ ಕಾ.ಪು.ಸಿದ್ದಲಿಂಗಸ್ವಾಮಿ ಸ್ಪರ್ಧಿಸಿದ್ದರು.





















































