ಕೊಪ್ಪಳ: ಲೋಕಸಭೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕಾಗಿ ಕೆಆರ್ಪಿಪಿ ಪಕ್ಷಕ್ಕೆ ಹೋಗುವೆ ಎನ್ನುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ನಡೆ ಬಗ್ಗೆ ಸ್ಪಷ್ಟಪಡಿಸಿದ ಅವರು, ನಾನು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು. ಕಾಂಗ್ರೆಸ್ ನ ಕೆಲವರು ನನ್ನ ಜೊತೆ ಮಾತನಾಡಿದ್ದಾರೆ. ಅವೆಲ್ಲವೂ ಸೌಜನ್ಯದ ಮಾತುಕತೆ ಎಂದ ಅವರು, ಪಕ್ಷ ಸೇರುವ ಬಗ್ಗೆ ಮಾತನಾಡಿಲ್ಲ ಎಂದರು.
ತಮಗೆ ಟಿಕೆಟ್ ತಪ್ಪಿದ ಬಳಿಕ ಬೆಂಬಲಿಗರು ಪಕ್ಷದ ಅಭ್ಯರ್ಥಿಗೆ ಮುತ್ತಿಗೆ ಹಾಕಿದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಗಣ್ಣ ಕರಡಿ, ಕಾರ್ಯಕರ್ತರು ಧ್ವಂಸ ಮಾಡುವುದು, ಹಲ್ಲೆ ಮಾಡುವುದು ಸರಿಯಲ್ಲ ಎಂದು ಸಲಹೆ ಮಾಡಿದರು.
























































