ಬೆಂಗಳೂರು; ಲೋಕಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳಿಂದ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ಇದೇ ವೇಳೆ, ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ಮೇಲೆ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಬಿಜೆಪಿ ಹಾಕಿದ್ದ ಪೋಸ್ಟ್ ಬಗ್ಗೆ ಆಕ್ಷೇಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಪ್ರಣಾಳಿಕೆನ್ನು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಎಕ್ಸ್ನಲ್ಲಿ ಬಿಜೆಪಿ ಪೋಸ್ಟ್ ಹಾಕಿತ್ತು. ಈ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ಠಾಣೆಯಲ್ಲಿ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪ ಬಹ್ಗೆ ಪ್ರಕರಣ ದಾಖಲಿಸಿರುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ಹಂಚಿಕೊಂಡಿದೆ.
A FIR has been lodged by the FST team of Malleswaram Assembly Constituency against a tweet posted in X by BJP’s Official handle on 23.04.2024 titled “Congress Manifesto or Muslim League Manifesto” at Malleswaram Police Station.
— Chief Electoral Officer, Karnataka (@ceo_karnataka) April 24, 2024