ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮತಕ್ಷೇತ್ರದ ನರಸೀಪುರ ಗ್ರಾಮದ ಬೂತ್ ಸಂಖ್ಯೆ 15ರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಬೂತ್ ವಿಜಯ ಅಭಿಯಾನದ ಅಂಗವಾಗಿ ಮನೆ ಮೇಲೆ ಪಕ್ಷದ ಧ್ವಜ ಹಾರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಮಾಜಿ ಶಾಸಕ ಎಂ.ವಿ. ನಾಗರಾಜ್, ಜಿಲ್ಲಾಧ್ಯಕ್ಷ ಎ.ವಿ. ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಹೇಮಂತ್ ಕುಮಾರ್, ಬೂತ್ ಅಧ್ಯಕ್ಷ ರಾಮಗಿರಿಗೌಡ, ಮತಕ್ಷೇತ್ರದ ಹಲವು ನಾಯಕರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.