ಬೆಳಗಾವಿ: ಬಿಜೆಪಿಯೊಳಗಿನ ಸಮರಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕುಟುಂಬ ಆಘಾತ ನೀಡಿದೆ.
ಬೆಳಗಾವಿ ದ್ವಿಸದಸ್ಯ ಪರಿಷತ್ ಕ್ಷೇತ್ರದ ಫಲಿತಾಂಶದಂತೆ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ. ಎರಡನೇ ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಲಖನ್ ಜಾರಕಿಹೊಳಿ ಗೆದ್ದಿದ್ದಾರೆ. ಚನ್ನರಾಜ ಹಟ್ಟಿಹೊಳಿ ಅವರು 3718 ಮತಗಳನ್ನು ಪಡೆದಿದ್ದಾರೆ .
© 2020 Udaya News – Powered by RajasDigital.