ಕಾರವಾರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಇದೇ ವೇಳೆ, ರಾಜ್ಯ ಕರಾವಳಿಯಲ್ಲಿ ಸಮುದ್ದಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಬಂಗಾಳಕೊಳ್ಳಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಹಲವೆಡೆ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಮೇ 22ರ ವರೆಗೆ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.