ಬೀದರ್: ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಕ್ರೂಸರ್ ವಾಹನ ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಆ ಸಂದರ್ಭದಲ್ಲಿ ಕ್ರೂಸರ್ ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತರನ್ನು 26 ವರ್ಷದ ವಿನೋದ್, 25 ವರ್ಷದವರಾದ ಪ್ರದೀಪ್ ಹಾಗೂ ವರ್ದೀಶ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು ಅವರು ಬೀದರ್ನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.