ಬೆಂಗಳೂರು: ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ (55) ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ, ರಾಜ್ಯ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.
ಸೋಮವಾರ ಬೆಳಗ್ಗೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜೇಗೌಡ ಅವರನ್ನು ತಕ್ಷಣ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು.
ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


















































