ಬೆಂಗಳೂರು: ಜಗತ್ತಿನ ಹಲವು ದೇಶಗಳಲ್ಲಿ ಆತಂಕ ಸೃಷ್ಟಿಸಿರುವ ‘ಒಮಿಕ್ರಾನ್’ ಇದೀಗ ಬೆಂಗಳೂರು ಮೂಲಕ ಭಾರತಕ್ಕೆ ಎಂಟ್ರಿ ಕೊಟ್ಟಿದೆ. ಬೆಂಗಳೂರಿನಲ್ಲಿ ಇಬ್ಬರಲ್ಲಿ ‘ಒಮಿಕ್ರಾನ್’ ದೃಢಪಟ್ಟಿದೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ, ದಕ್ಷಿಣ ಆಫ್ರಿಕಾದಿಂದ ನವೆಂಬರ್ 20ರಂದು ಬೆಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯಲ್ಲಿ ಈ ಸೋಂಕು ದೃಢಪಟ್ಟಿದೆ. ಇದೇ ವೇಳೆ, 46 ವರ್ಷದ ಮತ್ತೊಬ್ಬ ವ್ಯಕ್ತಿಯಲ್ಲೂ ಈ ಸೋಂಕು ಡೃಢಪಟ್ಟಿದೆ ಎಂದು ತಿಳಿಸಿದರು.
ಈ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಗುರುತಿಸಿ ಹೋಮ್ ಐಸೋಲೇಶನ್‌ಗೆ ಸೂಚಿಸಲಾಗಿದೆ. ಈ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ವ್ಯಕ್ತಿಗಳ ಬಗ್ಗೆ ಹೆಚ್ಚಿನ ಪರೀಕ್ಷೆಗಾಗಿ ಜಿನೋಮಿಕ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಿಕೊಡಲಾಗಿದೆ ಎಂದವರು ತಿಳಿಸಿದರು.