ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನೂತನ ಕಚೇರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಆವರಣದಲ್ಲಿ ಬುಧವಾರ ಉದ್ಘಾಟಿಸಿದರು.
ಕೇಂದ್ರದ ಮಾಜಿ ಸಚಿವ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಎಂಎಲ್ಸಿ ಎಸ್. ರವಿ, ಡಿಸಿಸಿ ಅಧ್ಯಕ್ಷ ಮುನಿಶಾಮಣ್ಣ ಮತ್ತಿತರರು ಹಾಜರಿದ್ದರು.