ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಗಳಾದ ತಜಿಂದರ್ ಬಗ್ಗಾ ಅವರ ಬಂಧನವನ್ನು ಖಂಡಿಸಿ ನಗರದ ಆಸ್ಟಿನ್ ಟೌನ್‍ನ ಆಪ್ ಕೇಂದ್ರ ಕಚೇರಿ ಮುಂಭಾಗದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಡಾ|| ಸಂದೀಪ್ ಕುಮಾರ್ ಅವರು ನೇತೃತ್ವ ವಹಿಸಿದ್ದರು. ನಂತರ ಪೊಲೀಸರು ಡಾ|| ಸಂದೀಪ್ ಕುಮಾರ್ ಹಾಗೂ ಪ್ರಮುಖ ಪದಾಧಿಕಾರಿಗಳನ್ನು ವಶಕ್ಕೆ ಪಡೆದರು.
ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಹೆಗ್ಡೆ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಅಭಿಲಾಷ ರೆಡ್ಡಿ, ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರಾದ ಪುನೀತ್ ರೆಡ್ಡಿ, ಉತ್ತರ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಗೌಡ, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
© 2020 Udaya News – Powered by RajasDigital.