ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ರಾಮನಗರ ಸಮೀಪದ ಜಯಪುರಗೇಟ್ ಬಳಿ ಬೆಳಗಿನ ಜಾವ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56), ಪುತ್ರ ಮುತ್ತುರಾಜ್ (28) ಮತ್ತು ಹಾಸನ ಮೂಲದ ಚಾಲಕ ಸಚಿನ್ (27) ಎಂದು ಗುರುತಿಸಲಾಗಿದೆ.
ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮಕೊಂದರಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ದುಡ್ಡಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಮನಗರ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ಮಾಡಿದ್ದಾರೆ.





















































