ರಾಮನಗರ: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಕೇರಳ ಮೂಲದ ಖಾಸಗಿ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ವೇಳೆ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಹತ್ತಿರ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ನಾಲ್ವರು ಪ್ರಯಾಣಿಕರು ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಾಲಕ ನಿದ್ದೆ ಮಂಪರಿನಿಂದ ನಿಯಂತ್ರಣ ಕಳೆದುಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಪೊಲೀಸರು ಘಟನೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.






















































