ನವದೆಹಲಿ: ದೇಶದ ಆತರಿಕ ಭದ್ರತೆಗೆ ಸಾಮಾಜಿಕ ಮಾಧ್ಯಮಗಳು ಸವಾಲಗಿ ಪರಿಣಮಿಸಿದೆ. ಅದರಲ್ಲೂ ಇತ್ತೀಚೆಗೆ ವಿಮಾನಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಬಾಂಬ್ ಬೆದರಿಕೆ ಒಡ್ಡಲಾಗಿರುವ ಪ್ರಕರಣ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ.
ಈ ನಡುವೆ, ಭಾರತೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಯ ಸಂದೇಶ ರವಾನಿಸಿದ್ದ ಹಲವು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಸೈಬರ್ ಭದ್ರತಾ ಏಜೆನ್ಸಿಗಳು ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸಿವೆ ಎಂದು ಮೂಲಗಳು ತಿಳಸಿವೆ.
ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವು ವಿವಿಧ ಖಾತೆಗಳನ್ನು ಪರಿಶೀಲಿಸಿದ್ದು, ಹಲವಾರು ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.