ಮಂಡ್ಯ: ನಾಗಮಂಗಲ ಸಮೀಪ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಆರೋಪದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಮಾನತು ಮಾಡಲಾಗಿದೆ ಎಂದು ಎಂದು ಮೂಲಗಳು ತಿಳಿಸಿವೆ.
ಬೆಳ್ಳೂರು ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಕರ್ತವ್ಯಲೋಪ ಕಾರಣ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.
ಕಾರು ಓವರ್ ಟೇಕ್ ವಿಚಾರದಲ್ಲಿ ಯುವಕರ ಗುಂಪುಗಳ ಮಧ್ಯೆ ಉಂಟಾದ ಜಗಳ ಗುಂಪುಘರ್ಷಣೆಗೆ ತಿರುಗಿ ವಾತಾವರಣ ಪ್ರಕ್ಷುಬ್ಧಗೊಂಡಿದ್ದರಿಂದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗಿಳಿದು ಪರಿಸ್ಥಿತಿಯನ್ನು ಹತೋಟಿಗೆ ಪಡೆದಿದ್ದಾರೆ. ಈ ನಡುವೆ ಕರ್ತವ್ಯಲೋಪ ಆರೋಪದಲ್ಲಿ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ.
























































