ಬೆಂಗಳೂರು: ರಾಜಧಾನಿ ಹೊರವಲಯದ ಮಹದೇವಪುರ ಬಳಿಯ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡದಲ್ಲಿ ಸಂಭವಿಸಿ ಕನಿಷ್ಠ 50 ವಾಹನಗಳು ಸುಟ್ಟು ಭಸ್ಮವಾಗಿವೆ.
ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎನ್ಬಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟುಹೋಗಿವೆ ಎಂದು ಅಂದಾಜಿಸಲಾಗಿದೆ.