ನವದೆಹಲಿ: ಮೋದಿ ಸರ್ಕಾರದ ಮಹತ್ವಾಕಾಂಕ್ಷಿಯ ಕ್ರಿಮಿನಲ್ ಕಾಯ್ದೆ ಮಾರ್ಪಾಡು ಮಾಡುವ ಮಸೂದೆಗೆ ಸಂಸತ್ ಅನುಮೋದನೆ ನೀಡಿದೆ.
ಬ್ರಿಟಿಷ್ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಧ್ವನಿಮತದಿಂದ ಅಂಗೀಕರಿಸಲಾಯಿತು. ಗೃಹ ಸಚಿವ ಅಮಿತ್ ಶಾ ಅವರು ಕಳೆದ ವಾರ ಲೋಕಸಭೆಯಲ್ಲಿ ಭಾರತೀಯ ನ್ಯಾಯ (ಎರಡನೇ) ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ (ಎರಡನೇ) ಮಸೂದೆಗಳನ್ನು ಮಂಡಿಸಿದ್ದರು. ಈ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.







































































