ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ತತ್ತರಿಸಿರುವ ರಾಜ್ಯದಲ್ಲೀಗ ಬ್ಲ್ಯಾಕ್ ಫಂಗಸ್ ಅವಾಂತರ ಸೃಷ್ಟಿಯಾಗಿದೆ. ನಿಗೂಢವಾಗಿ ಮನುಷ್ಯನನ್ನು ಕಪ್ಪುಶಿಲೀಂದ್ರ ಆವರಿಸಿಕೊಳ್ಳುತ್ತಿದ್ದು ರಾಜ್ಯದಲ್ಲೂ ಅನೇಕ ಪ್ರಕರಣಗಳು ವರದಿಯಾಗುತ್ತಿವೆ.
ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಕ್ಷಿಪ್ರ ನಿರ್ಧಾರವನ್ನು ಕೈಗೊಂಡಿದ್ದಾರೆ. ರಾಜ್ಯದಲ್ಕಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡವರಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆ ಕೊಡಿಸಲಾಗಿವುದೆಂದು ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಿಎಂ ಯಡಿಯೂರಪ್ಪ, ಬ್ಲ್ಯಾಕ್ ಫಂಗಸ್ ಸೋಂಕಿಗೆ ಜಿಲ್ಲಾಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ಈ ಕುರಿತಂತೆ ಅವರು ಟ್ವೀಟ್ ಮಾಡಿಯೂ ಮಾಹಿತಿ ಹಂಚಿಕೊಂಡಿದ್ದಾರೆ. ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನಹರಿಸಿ, ಜಾಗರೂಕತೆಯಿಂದ ಇರಬೇಕು ಎಂದು ವಿನಂತಿಸುತ್ತೇನೆ ಎಂದೂ ಹೇಲಿಕೊಂಡಿದ್ದಾರೆ.
'ಬ್ಲ್ಯಾಕ್ ಫಂಗಸ್ ಸೋಂಕಿಗೆ ಜಿಲ್ಲಾಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆೆ ಕಡೆಗೆ ಹೆಚ್ಚಿನ ಗಮನಹರಿಸಿ, ಜಾಗರೂಕತೆಯಿಂದ ಇರಬೇಕು ಎಂದು ವಿನಂತಿಸುತ್ತೇನೆ' : ಮುಖ್ಯಮಂತ್ರಿ @BSYBJP
— CM of Karnataka (@CMofKarnataka) May 21, 2021