ಬೆಂಗಳೂರು: ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ಸಿಗಲಿದೆ. ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರೈಗೆ ಮಾಹಿತಿ ಒದಗಿಸಿದ ಅವರು, ‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಎಂಬ ಧ್ಯೇಯ ವಾಕ್ಯದೊಂದಿಗೆ ‘ಆಶಾಕಿರಣ’ ಕಾರ್ಯಕ್ರಮ ಜಾರಿಗೆ ಬರಲಿದ್ದು, ಇದರಲ್ಲಿ ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.
‘ಆಶಾಕಿರಣ’ ಕಾರ್ಯಕ್ರಮದಡಿ ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತವಿತರಿಸಲಾಗುತ್ತದೆ. ಅಗತ್ಯ ಸಂದರ್ಭದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನೀಡಲಾಗುತ್ತದೆ. ಈ ಯೋಜನೆಗೆ ಚಾಲನೆ ನೀಡಿದ ನಂತರ, ಹಾವೇರಿಯ ಜೊತೆಗೆ, ಚಾಮರಾಜನಗರ ಚಿಕ್ಕಬಳ್ಳಾಪುರ, ಕಲಬುರಗಿ ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ ದಿನೇಶ್ ಗುಂಡೂರಾವ್, ಎರಡನೇ ಹಂತದಲ್ಲಿ ರಾಯಚೂರು, ಉತ್ತರಕನ್ನಡ, ಚಿತ್ರದುರ್ಗ, ಮಂಡ್ಯ, ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದರು.



















































