ಜೈಸಲ್ಮೇರ್: ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಪತನವಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ತರಬೇತಿ ಕಾರ್ಯಾಚರಣೆ ಸಂದರ್ಭದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್ಗಳು ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ, ದುರ್ಘಟನೆ ಬಗ್ಗೆ ತನಿಖೆಗೆ ಆದೇಶಿಸಿರುವ ರಕ್ಷಣಾ ಇಲಾಖೆ, ಅಪಘಾತದ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಹೇಳಿದೆ.

















































