ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಳ್ಳಾರಿಯಲ್ಲಿ ಭಾನುವಾರ ಭಾರತ್ ಜೋಡೋ ಯಾತ್ರೆಯ ಪೂರ್ವಭಾವಿ ಸಿದ್ಧತೆ ಸಭೆ ನಡೆಸಿದರು.
ಕರ್ನಾಟಕದಲ್ಲಿ ಯಾತ್ರೆಯ ಉಸ್ತುವಾರಿ ಹೊತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ರಾಜ್ಯಸಭೆ ಸದಸ್ಯ ಎಲ್ ಹನುಮಂತಯ್ಯ, ಮಾಜಿ ಸಚಿವರಾದ ಕೆ ಜೆ ಜಾರ್ಜ್, ಅಲ್ಲಮ್ ವೀರಭದ್ರಪ್ಪ, ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಶಾಸಕ ನಾಗೇಂದ್ರ ಸಹಿತ ಅನೇಕ ನಾಯಕರು ಭಾಗವಹಿಸಿದ್ದರು.