ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಬಿರುಸುಗೊಂಡಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಏರುಪೇರಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ.
ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುರುವಾರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.