ಕಲಬುರಗಿ: ವಿವಾಹ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದವರಿದ್ದ ಕಾರು ಅಪಘಾತಕ್ಕೀಡಾಗಿ ಕಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ , ಅವರ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ.
ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ, ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.






















































