ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು 8-11-2021ರ ಸೋಮವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ನವೆಂಬರ್ 8ರಂದು ಸಂಜೆ 6.25 ಗಂಟೆಗೆ ಬೆಂಗಳೂರಿನ ವಿಮಾನನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ಕೆ.ಕೆ.ಗೆಸ್ಟ್ ಹೌಸ್‍ಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ. 9-11-2021ರ ಮಂಗಳವಾರ ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ, ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಚುನಾವಣಾ ಸಿದ್ಧತಾ ಸಭೆ, ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು. ಬಳಿಕ ರಾತ್ರಿ ಅವರು ಕೆ.ಕೆ.ಗೆಸ್ಟ್ ಹೌಸ್‍ನಲ್ಲಿ ವಾಸ್ತವ್ಯ ಇರುವರು.
10-11-2021ರ ಬುಧವಾರ ಬೆಳಿಗ್ಗೆ ಅವರು ವಿಮಾನದಲ್ಲಿ ದೆಹಲಿಗೆ ಹಿಂತಿರುಗಲಿದ್ದಾರೆ.