ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದರು.
ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು.
ಜಿ.ಸಿ.ಚಂದ್ರಶೇಖರ್ ಅವರು ಬಿಎಲ್ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ.
ದೆಹಲಿಯಲ್ಲಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ. ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯತೆ ಇದೆ ಎಂದು ಪಕ್ಷ ಉಳಿಸಿಕೊಳ್ಳಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಇದರಿಂದ ಸಂತೋಷವಾಗಿದೆ, ನನ್ನ ಆತ್ಮಸ್ಥೈರ್ಯ ಹೆಚ್ಚಿಸಿದೆ. ಅಧಿಕಾರ ಸಿಗದ ಕಾರ್ಯಕರ್ತರು ಕೂಡ ತಮ್ಮ ಹಣದಲ್ಲಿ ಈ ಪ್ರತಿಭಟನೆಗೆ ಆಗಮಿಸಿದ್ದಾರೆ ಎಂದರು.
ನಗರ ಭಾಗದಲ್ಲಿ ಮತ ಕಳ್ಳತನ ಹೆಚ್ಚಾಗಿದೆ ಎಂದು ಕೇಳಿದಾಗ, “ಆಳಂದ ಕ್ಷೇತ್ರದಲ್ಲಿ ಹಳ್ಳಿಗಳಲ್ಲಿ ಹೊರ ರಾಜ್ಯಗಳ ಫೋನ್ ನಂಬರ್ ಬಳಸಿ ಮತದಾರರ ಹೆಸರು ತೆಗೆಸಲಾಗಿದೆ” ಎಂದು ತಿಳಿಸಿದರು.






















































