ಮಂಡ್ಯ:ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಲಭೆ ನಡೆದ ತಕ್ಷಣ ಅಧಿಕಾರಿಗಳು 21 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.
ತನಿಖೆಯನ್ನು ಉನ್ನತ ಮಟ್ಟದಲ್ಲಿ ಎಲ್ಲಾ ರೀತಿಯಲ್ಲೂ ಪೊಲೀಸ್ ಇಲಾಖೆಯಿಂದ ವಿಚಾರಣೆ ನಡೆಸಲು ಐ.ಜಿ ಹಾಗೂ 8 ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಪೂರ್ಣ ವರದಿ ಸಿದ್ಧ ಪಡಿಸಿ ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದರು.
ಮದ್ದೂರು ಗಣಪತಿ ವಿಸರ್ಜನೆ ವೇಳೆ ಉಂಟಾಗಿರುವ ಗಲಭೆ ರಾಜಕೀಯ ಉದ್ದೇಶವಿದೆಯೋ ಅಥವಾ ಇಲ್ಲವೋ ಎಂಬುದನ್ನು ಪರಿಶೀಲಿಸಲಾಗುವುದು. ಯಾರನ್ನು ಓಲೈಕೆ ಮಾಡುವ ಪ್ರಶ್ನೆ ಇಲ್ಲಾ. ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಣ ಕ್ರಮಕೈಗೊಳ್ಳಲಾಗುವುದು ಎಂದರು.
ಮಂಡ್ಯ ಜಿಲ್ಲೆ ಸ್ವಾತಂತ್ರ್ಯ ಹೋರಾಟಕ್ಕೆ. ಕಾವೇರಿ ಹೋರಾಟಕ್ಕೆ ಹೆಸರುವಾಸಿಯಾಗಿದೆ. ಸರಿಯಲ್ಲ. ಧರ್ಮದ ಹೆಸರಿನಲ್ಲಿ ನಮ್ಮ ಸರ್ಕಾರ ರಾಜಕೀಯ ಮಾಡುವುದಿಲ್ಲ ಧಾರ್ಮಿಕ ಸಂಘಟನೆಗಳು ಯಾವುದೇ ರಾಜಕೀಯ ಪ್ರಚೋದನೆಗೆ ಒಳಗಾಗಬಾರದು ಎಂದರು.




























































