ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದ ಮಹಿಳಾ ಶೂಟರ್ ಮನು ಭಾಕರ್ ಸಹಿತ ನಾಲ್ವರು ಅಪ್ರತಿಮ ಕ್ರೀಟಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿ ಪ್ರಕಟಿಸಿದೆ.
ವಿಶ್ವ ಚೆಸ್ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ 18 ವರ್ಷದ ಡಿ.ಗುಕೇಶ್ ಹಾಗೂ ಭಾರತದ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೂ ಕೇಂದ್ರ ಸರ್ಕಾರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ.
ರಾಷ್ಟ್ರಪತಿ ಭವನದಲ್ಲಿ ಈ ತಿಂಗಳ 17 ರಂದು ಈ ನಾಲ್ವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.