ಶಿವಮೊಗ್ಗ: ಮಲೆನಾಡು ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ನೆನಪಿನಂಗಳದಲ್ಲಿದೆ. ಸ್ವಾತಂತ್ರ್ಯ ವೀರ ಸಾವರ್ಕರ್ ಅವರು 1944 ರಲ್ಲಿ ಶಿವಮೊಗ್ಗಕ್ಕೆ ಭೇಟಿ ನೀಡಿದ ಸ್ಮರಣಾರ್ಥ ಭವ್ಯ ಸಮಾರಂಭ ಆಯೋಜಿಸಲಾಗಿದೆ. ಶಿವಮೊಗ್ಗದಲ್ಲಿ ಅಕ್ಟೋಬರ್ 22ರಂದು ಸಂಜೆ ಈ ಕಾರ್ಯಕ್ರಮ ನಡೆಯಲಿದೆ.
ಈ ಸಮಾರಂಭ ಕುರಿತು ಮಾಹಿತಿ ಹಂಚಿಕೊಂಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದು ತಿಳಿಸಿದರು.
1944ರಲ್ಲಿ ವೀರ್ ಸಾವರ್ಕರ್ ಶಿವಮೊಗ್ಗಕ್ಕೆ ಭೇಟಿ ನೀಡಿದ ಸ್ಮರಣಾರ್ಥ ಸಾಮಗಾನ ಹಾಗೂ ಶ್ರೀಗಂಧ ಸಂಸ್ಥೆಯ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
























































