ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಹೊತ್ತಿರುವ ವಿಜಯ್ ಮಲ್ಯ, ನೀರವ್ ಮೋದಿಯ ಸಾವಿರಾರು ಕೋಟಿ ರೂಪಾಯಿ ಆಸ್ತಿಯನ್ನು ಬ್ಯಾಂಕ್‌ಗಳಿಗೆ ಜಮಾ ಮಾಡಲಾಗಿದೆ. ಲೋಕಸಭಾ ಅಧಿವೇಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿ ಮಾರಾಟದಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು (ಪಿಎಸ್‌ಬಿ) 14,131.6 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ. ನೀರವ್ ಮೋದಿಯಿಂದ 1,052 ಕೋಟಿ ರೂಪಾಯಿ ಮತ್ತು ಮೆಹುಲ್ ಚೋಕ್ಸಿಯಿಂದ 2,565 ಕೋಟಿ ರೂಪಾಯಿಗಳನ್ನು ಆಸ್ತಿ ಜಪ್ತಿ ಮಾಡಿದ ಹಣದಿಂದ ಬ್ಯಾಂಕ್‌ಗಳಿಗೆ ಪಾವತಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಮಾಹಿತಿ ನೀಡಿದರು.
ಈ ಸಾಲಗಾರರಿಂದ ಸುಮಾರು 15,000 ಕೋಟಿ ಮೌಲ್ಯದ ಆಸ್ತಿಯನ್ನು ಬ್ಯಾಂಕ್‌ಗಳಿಗೆ ಜಮಾ ಮಾಡಲಾಗಿದೆ ಎಂದವರು ತಿಳಿಸಿದರು.























































