ಮುಂಬೈ: ಮಹಾರಾಷ್ಟ್ರ ರಾಜಕಾರಣ ಕ್ಷಿಪ್ರ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್ ಮತ್ತು ಇತರ ಎಂಟು ಜನರ ವಿರುದ್ಧ ಎನ್‌ಸಿಪಿ ಅನರ್ಹತೆಗಾಗಿ ದೂರು ಅರ್ಜಿ ಸಲ್ಲಿಸಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್, ಪಕ್ಷದ ವರಿಷ್ಠ ಶರದ್ ಪವಾರ್ ಅವರ ಸೂಚನೆಯ ನಂತರ ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ಅನರ್ಹತೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.