ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂಪೂರ್ಣ ಚೇತರಿಸಿಕೊಂಡು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ವಾರದಿಂದ ಅವರು ಅಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು.
ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಈಗ ಗಮನಾರ್ಹ ಸುಧಾರಣೆ ಕಂಡುಬಂದಿದೆ. ವೈದ್ಯರ ಸಲಹೆಯ ಮೇರೆಗೆ ಅವರಿಗೆ ಆಸ್ಪತ್ರೆಯಿಂದ ಬಿಡುಗಡೆ ನೀಡಲಾಗಿದ್ದು, ಅವರು ನೇರವಾಗಿ ತಮ್ಮ ಪದ್ಮನಾಭನಗರ ನಿವಾಸಕ್ಕೆ ಆಗಮಿಸಿದ್ದಾರೆ.
ವೈದ್ಯರ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮುಂದಿನ ಕೆಲವು ದಿನಗಳು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ.