ನಾಸಿಕ್: ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷಗಳ ನಂತರ ಮಹತ್ವದ ತೀರ್ಪು ಹೊರಬಿದ್ದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಪ್ರಮುಖ ಆರೋಪಿಗಳಾದ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ (55) ಹಾಗೂ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ (53) ಅವರನ್ನು ಖುಲಾಸೆಗೊಳಿಸಿದೆ.
ನಾಸಿಕ್ ಜಿಲ್ಲೆಯ ಮಾಲೇಗಾಂವ್‌ನಲ್ಲಿ 2008ರ ಸೆಪ್ಟೆಂಬರ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದರು. ಪ್ರಕರಣದ ತನಿಖೆಯನ್ನು ಬಳಿಕ ಎನ್‌ಐಎ ವಹಿಸಿಕೊಂಡಿತು. ಈ ಪ್ರಕರಣದಲ್ಲಿ ಪ್ರಜ್ಞಾ ಠಾಕೂರ್, ಕರ್ನಲ್ ಪುರೋಹಿತ್ ಸೇರಿದಂತೆ ಹಲವು ಮಂದಿ ಆರೋಪಿಗಳಾಗಿ ಹೆಸರು ಕಾಣಿಸಿಕೊಂಡಿತ್ತು.
ವಿಚಾರಣೆ ಪೂರ್ಣಗೊಳಿಸಿರುವ NIA ವಿಶೇಷ ನ್ಯಾಯಾಲಯವು ಗುರುವಾರ ತೀರ್ಪು ಪ್ರಕಟಿಸಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿದೆ.