ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯು ಸರಣಿ ಅನಾಹುತಗಳನ್ನು ಸೃಷ್ಟಿಸಿದ್ದು, ಸುಮಾರು ನೂರು ಮಂದಿಯನ್ನು ಬಲಿ ತೆಗೆದುಕೊಂಡಿದೆ.
ಈ ವರ್ಷ ಮುಂಗಾರು ಮಳೆ ಅತೀ ಹೆಚ್ಚು ಜನರನ್ನು ಬಲಿ ಪಡೆದಿದೆ ಎನ್ನಲಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ 25ಕ್ಕೂ ಹೆಚ್ಚು ಮಂದಿ ವಿವಿಧ ಅವಘಡಗಳಲ್ಲಿ ಸಾವನ್ನಪ್ಪಿದರೆ, ಮಲೆನಾಡಿನ ಜಿಲ್ಲೆಗಳಲ್ಲಿ 20 ಮಂದಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ.
ಇನ್ನುಳಿದ ಜಿಲ್ಲೆಗಳಲ್ಲೂ ಮಳೆ ಸಂದರ್ಭದ ಅನಾಹುತಗಳಲ್ಲಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆಯಾಗಿ ಮಳೆ, ಸಿಡಿಲು, ಪ್ರವಾಹ, ವಿದ್ಯುತ್ ತಂತಿ ತಾಗಿ, ಮರ ಬಿದ್ದು ಸುಮಾರು 100 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.



















































