ಬೆಂಗಳೂರು:ಮಾಜಿ ಸಚಿವ ಬಸವರಾಜ ರಾಯರಡ್ಡಿ ಅವರನ್ನು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಬಸವರಾಜ ರಾಯರಡ್ಡಿ ಅವರು ಸಚಿವ ಸ್ಥಾನಾಕಾಂಕ್ಷಿಯಾಗಿದ್ದರು. ಆದರೆ ಮಂತ್ರಿಗಿರಿ ಸಿಕ್ಕಿರಲಿಲ್ಲ. ಇದೀಗ ಅವರನ್ನು ಸಿಎಂ ಅವರ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

























































