ಬೆಂಗಳೂರು: ಮುಡಾ ಹಗರಣ ಮುಂದಿಟ್ಟು ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಪಾದಯಾತ್ರೆಯನ್ನು ಮೊಟಕುಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತಿದೆ ಗೃಹ ಸಚಿವ ಪರಮೇಶ್ವರ್ ಹೇಳಿಕೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪ ಮಾಡಿ, ಜನರಿಗೆ ತಪ್ಪು ಸಂದೇಶ ನೀಡುವ ಬಿಜೆಪಿ ಪ್ರಯತ್ನಕೆ ಸರ್ಕಾರ ಅವಲಾಶ ನೀಡಲ್ಲ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ ಪಾದಯಾತ್ರೆ ನಡೆಸಲು ಉದ್ದೇಶಿಸಿರುವ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಈ ಹಿಂದೆ ನಡೆಸಿದ ಪಾದಯಾತ್ರೆ ಮಾದರಿಯಲ್ಲಿ ಬಿಜೆಪಿ ಹೋರಾಟ ನಡೆಸಲು ಮುಂದಾಗಿದೆ. ಹಿಂದೆ ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶದಿಂದ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು. ಆದರೆ, ಈಗ ಬಿಜೆಪಿಯವರು ಜನರಿಗೆ ತಪ್ಪು ಸಂದೇಶ ರವಾನಿಸಲು ಪಾದಯಾತ್ರೆ ನಡೆಸಲು ಮುಂದಾಗಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಕಾನೂನುಬಾಹಿರವಾಗಿ ಏನೂ ನಡೆದಿಲ್ಲ ಎಂದವರು ಹೇಳಿದರು.




















































