ದೆಹಲಿ: ಕರ್ನಾಟಕ ಸರ್ಕಾರ ಮುಸ್ಲಿಮರಿಗೆ ಶೇಕಡಾ 4 ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಪಂಚಮಸಾಲಿ ಲಿಂಗಾಯತ ಸಹಿತ ವಿವಿಧ ಸಮುದಾಯಗಳಿಗೆ ಇತ್ತೀಚಿಗೆ ಮೀಸಲಾತಿ ಪ್ರಕಟಿಸಿದ್ದ ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯದ ಶೇಕಡಾ 4ರ ಮೀಸಲಾತಿಯನ್ನು ರದ್ದುಪಡಿಸಿತ್ತು.
ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿ, ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ.