ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಆರೋಪ ಇದೀಗ ರಾಜ್ಯ ರಾಜಕೀಯದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯ ಕುಟುಂಬವೇ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಬಗ್ಗೆ ಸಿಬಿಬ ತನಿಖೆಗೆ ಆದೇಶಿಸುವಂತೆ ಬಿಜೆಪಿ ಆಗ್ರಹಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ‘ಮೂಡಾ ಹಗರರಣ’ದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ವಿರೋಧ ಪಕ್ಷದವರು ಕೇಳುತ್ತಾರೆ ಎಂದು ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದರು.