ಗದಗ: ಗದಗ ಜಿಲ್ಲೆಯ ಸೊರಣಗಿ ಗ್ರಾಮದಲ್ಲಿ ಇತ್ತೀಚೆಗೆ ನಟ ಯಶ್ ಜನ್ಮದಿನದ ಸಂದರ್ಭದಲ್ಲಿ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಅಭಿಮಾನಿಗಳ ಬಂಧುಗಳಿಗೆ ಯಶ್ ಅವರು ಪರಿಹಾರದ ನೆರವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ಮೃತರಾದ ಮುರಳಿ, ನವೀನ್ ಮತ್ತು ಹನುಮಂತ ಅವರ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿಗಳ ಚೆಕ್‌ಗಳನ್ನು ತಮ್ಮ ಆಪ್ತರ ಮೂಲಕ ಯಶ್ ಅವರು ಕಳುಹಿಸಿಕೊಟ್ಟಿದ್ದಾರೆ.
ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿದ ಯಶ್ ಆಪ್ತರು ಈ ಪರಿಹಾರದ ಚೆಕ್ ನೀಡುವ ಸಂದರ್ಭದಲ್ಲಿ ಮೃತರ ಕುಟುಂಬದ ಸದಸ್ಯರು ಬಿಕ್ಕಿ ಬಿಕ್ಕಿ ಅತ್ತ ಸನ್ನಿವೇಶ ಮನಕಲಕುವಂತಿತ್ತು.



















































