ಬೆಂಗಳೂರು: ಸೆಪ್ಟೆಂಬರ್ 26 ರಿಂದ ಪ್ರಾರಂಭವಾಗಲಿರುವ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮ್ಮತಿಸಿದ್ದಾರೆ ಎನ್ನಲಾಗಿದೆ.
ರಾಷ್ಟ್ರಪತಿಯವರನ್ನು ಆಹ್ವಾನಿಸಿ ಸೆಪ್ಟೆಂಬರ್ 6ರಂದು ಮುಖ್ಯಮಂತ್ರಿಯವರು ಪತ್ರ ಬರೆದಿದ್ದರು. ಇದಕ್ಕೆ ರಾಷ್ಟ್ರಪತಿಯವರು ಸಮ್ಮತಿ ಸೂಚಿಸಿರುವುದಾಗಿ ರಾಷ್ಟ್ರಪತಿ ಭವನದ ಅಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
























































