ದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕಾನೂನು ಸಚಿವ ಕಿರಣ್ ರಿಜಿಜು ಅವರು ನಿರ್ವಹಿಸುತ್ತಿದ್ದ ಖಾತೆಯನ್ನು ಸಚಿವ ಅರ್ಜುನ್ ಮೇಘವಾಲ್ ಅವರಿಗೆ ವಹಿಸಲಾಗಿದೆ. ಸಚಿವ ಕಿರಣ್ ರಿಜಿಜು ಅವರಿಗೆ ಭೂ ವಿಜ್ಞಾನ ಇಲಾಖೆಯ ಹೊಣೆ ವಹಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಶಿಫಾರಸಿನಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖಾತೆ ಮರುಹಂಚಿಕೆಗೆ ಅನುಮೋದನೆ ನೀಡಿದ್ದಾರೆ.























































