ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ಬಳಿ ರೌಡಿ ಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜನ ಬರ್ಬರ ಕೊಲೆಯಾಗಿದೆ. ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಹಂತಕರು ಮಂಜನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಈತನ ಹಾವಳಿ ಇತ್ತೆಂದು ಪೊಲೀಸರು ಹೇಳುತ್ತಿದ್ದಾರೆ.
ಕೆಲ ಸಮಯದ ಹಿಂದಷ್ಟೇ ಕುಟುಂಬ ಸಮೇತ ಕುಣಿಗಲ್ಗೆ ಶಿಫ್ಟ್ ಆಗಿದ್ದ ಮಂಜ, ಭಾನುವಾರ ಯುಗಾದಿ ಹಬ್ಬದ ಹಿನ್ನೆಲೆ ಬೆಂಗಳೂರಿಗೆ ಭೇಟಿನೀಡಿದ್ದ. ಸ್ನೇಹಿತರ ಜೊತೆ ಗೊಲ್ಲಹಳ್ಳಿ ಬಳಿ ರಾತ್ರಿ ಎಣ್ಣೆ ಪಾರ್ಟಿ ಮಾಡ್ತಿದ್ದಾಗ 2 ಬೈಕ್ನಲ್ಲಿ ಬಂದಿದ್ದ ಹಂತಕರು ಮಾರಕಾಸ್ತ್ರಗಳಿಂದ ಮಂಜನ ದಾಳಿ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.