ಬೆಂಗಳೂರು:ಕರ್ನಾಟಕ ರಾಜ್ಯದ ರೈತರಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತಪರ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಪ್ರದೇಶ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ .
ರಾಜ್ಯಕ್ಕೆ ಬರಬೇಕಾಗಿದ್ದ 18,172 ಕೋಟಿ ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ. ಬರ ಪರಿಹಾರ ವಿಚಾರವಾಗಿ ನ್ಯಾಯಾಲಯದ ಮೊರೆ ಹೋಗಿದ್ದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಿದ್ದು ಈ ಮೂಲಕ ಪ್ರಧಾನಮಂತ್ರಿ, ಗೃಹಮಂತ್ರಿಯ ರೈತ ವಿರೋಧಿ ನಿಲುವಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ ಎಂದು ಸುರ್ಜೇವಾಲಾ ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಮೊದಲು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸುವುದನ್ನು ಕಲಿಯಬೇಕು. ಕನ್ನಡಿಗರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಎಂದಿಗೂ ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷವು ಹಿಂದೆ, ಮುಂದೆ, ಎಂದೆಂದೂ ಕೂಡ ಕನ್ನಡಿಗರ ಹಾಗೂ ರಾಜ್ಯದ ರಕ್ಷಣೆಗಾಗಿ ಸದಾ ಬದ್ದರಾಗಿದ್ದು ಮುಂದೆಯೂ ಸಹ ನೆಲ ಜಲದ ವಿಚಾರಗಳಲ್ಲಿ ರಾಜಿಯಾಗುವುದಿಲ್ಲ ಎಂದವರು ಹೇಳಿದ್ದಾರೆ.
















































