ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ.
ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಕೂಡಾ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲೂ ಇಂದು ಮಳೆಯಾಗುವ ನಿರೀಕ್ಷೆ ಇದೆ.
ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಈ ಪರಿಣಾಮವಾಗಿ ಜುಲೈ 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ತಜ್ಞರು ಹೇಳಿದ್ದಾರೆ.