ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಗೋಯಲ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಪ್ರಸಕ್ತ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಜುಲೈ 31 ರಂದು ನಿವೃತ್ತಿಯಾಗಲಿದ್ದು, ತೆರವಾಗುವ ಸ್ಥಾನಕ್ಕೆ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.
ಇದರ ಬೆನ್ನಲ್ಲೇ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿ ಆದೇಶ ಹೊರಡಿಸಿದೆ.

























































