ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸಹಿತ ಕರಾವಳಿ ಮಾಲೆನಾಡಿನ ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲೂ ಮಳೆಯಾ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.