ಬೆಂಗಳೂರು : ಬೇಸಿಗೆಯ ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಜನರಿಗೆ ಮಳೆಯ ಸಿಂಚನ ಸ್ವಲ್ಪ ಸಮಾಧಾನ ತಂದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದೆ.
ಮಲೆನಾಡು ಉತ್ತರ ಕರ್ನಾಟಕದ ಹಲವೆಡೆ ಮಳೆಯಾಗಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಹಾವೇರಿ, ವಿಜಯನಗರ, ಜಿಲ್ಲೆಗಳಲ್ಲಿ ಮಳೆಯಾಗಿದೆ.























































