ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡು ಭ್ರಷ್ಟ ಅಧಿಕಾರಿಗಳ ಪಾಳಯದಲ್ಲಿ ನಡುಕ ಸೃಷ್ಟಿಸಿದ್ದಾರೆ.
ರಾಮನಗರ ಜಿಲ್ಲೆ ಮಂಚನಾಯ್ಕನಹಳ್ಳಿ ಗ್ರಾಪಂ ಪಿಡಿಒ ಯತೀಶ್ ವಿರುದ್ದ ಅಕ್ರಮ ಆಸ್ತಿ ಅರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ತಂಡ ಆ ಅಧಿಕಾರಿಯನ್ನು ವಿಚಾರಣೆಗೆ ಗುರಿಪಡಿಸಿದೆ.
ಚನ್ನಪಟ್ಟಣದಲ್ಲಿ ಅಧಿಜಾರಿ ಶೀಭಾ ಎಂಬವರ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್ ರೇವಣಕರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಬೀದರ್ ನಲ್ಲಿ ಕಾರಂಜಾ ವಿಭಾಗದ ಇಇ ಶಿವಕುಮಾರ ಸ್ವಾಮಿ ನಿವಾಸದ ಮೇಲೂ ಲೋಕಾಯುಕ್ತ ತಂಡ ದಾಳಿ ಮಾಡಿ ಅಕ್ರಮ ಅಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ KRIDL EE ಸದಾಶಿವಯ್ಯ ಅವರ ಮನೆ, ಕಚೇರಿಗೆ ತೆರಳಿರುವ ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ.