ಮೈಸೂರು, ಜೂನ್ 08 : ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಇಂದ ಯಾರಿಗೂ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಬಲದಿಂದಲೇ ಗೆಲ್ಲಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇರುವ ಪ್ರಸ್ತಾವನೆಗೂ ನಮಗೂ ಸಂಬಂಧವಿಲ್ಲ ಎಂದರು.
ಲೋಕಾಯುಕ್ತ ನೇಮಕಾತಿಗೆ ಎಲ್ಲ ಪ್ರಕ್ರಿಯೆ ಮುಗಿದು ಕೊನೆ ಹಂತದಲ್ಲಿದೆ. ಆದಷ್ಟು ಬೇಗನೆ ಲೋಕಾಯುಕ್ತರು ನೇಮಕವಾಗಲಿದ್ದಾರೆ ಎಂದರು.


























































